ಸ್ಮಶಾನಕ್ಕೆ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದದಲಿತ ಮುಖಂಡರು ಗರುವಾರ ಚನ್ನಪಟ್ಟಣ ತಾಲ್ಲೂಕು ಕಚೇರಿ ಮುಂದೆ ಶವ ಇರಿಸಿ ಪ್ರತಿಭಟನೆ ನಡೆಸಿದ್ದಾರೆ.
ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ ಯುವಕ ಬುಧವಾರ ಬೈಕ್ ಅಪಘಾತದಲ್ಲಿ ಸಾವಿಗೀಡಾಗಿದ್ದ. ಶವ ಸಂಸ್ಕಾರ ಮಾಡಲು ಕುಟುಂಬದವರು ಶವವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗುವಾಗ ಸ್ಥಳೀಯರು ನಮ್ಮ ಜಮೀನಿನ ಮೇಲೆ ಹೋಗಬೇಡಿ ಎಂದು ಅಡ್ಡಿಪಡಿಸಿದ್ದಾರೆ.
ಸ್ಮಶಾನಕ್ಕೆ ಹೋಗಲು ಜಾಗವಿಲ್ಲದ ಕಾರಣ ಕುಪಿತಗೊಂಡ ಗ್ರಾಮಸ್ಥರು ಶವವನ್ನು ಚನ್ನಪಟ್ಟಣಕ್ಕೆ ತೆಗೆದುಕೊಂಡು ಬಂದು ತಾಲ್ಲೂಕು ಕಚೇರಿಗೆ ಮುಂದೆ ಪ್ರತಿಭಟನೆ ನಡೆಸಿದರು. ಸ್ಮಶಾನಕ್ಕೆ ಹೋಗಲು ಜಾಗ ಕೊಡಿಸದಿದ್ದರೆ, ಕಚೇರಿ ಮುಂಭಾಗವೇ ಶವಸಂಸ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.