ಮಾಗಡಿ: ತಾಲ್ಲೂಕಿನ ಸೋಲೂರು ಆರ್ಯ ಈಡಿಗರ ಮಹಾಸಂಸ್ಥಾನ ನಾರಾಯಣ ಗುರುಪೀಠದ ಆವರಣದಲ್ಲಿ ರೇಣುಕಾ ಯಲ್ಲಮ್ಮದೇವಿ ಆಯುಧ ಪೂಜೆ ಮತ್ತು ವಿಜಯದಶಮಿ ಮಹೋತ್ಸವ ಮಂಗಳವಾರ ನಡೆಯಿತು.
ನಾರಾಯಣ ಗುರುಮಠದ ಅಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ರೇಣುಕಾ ಯಲ್ಲಮ್ಮದೇವಿ ಉತ್ಸವ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು. ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ,ಜಿ.ಗೋಪಾಲ್ ಈಡಿಗ, ಕುದೂರು ಶಶಾಂಕ್ ಈಡಿಗ, ಬೆಂಗಳೂರಿನ ಸಾಹಿತಿ ನರಸಿಂಹಮೂರ್ತಿ ಹಾಗೂ ಭಕ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.