ಮಾಗಡಿ: ತಾಲ್ಲೂಕಿನ ಕಲ್ಯಾ ಗ್ರಾಮದಲ್ಲಿ ಏ. 17ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ವಾಸ್ತವ್ಯ ಮಾಡಲಿದ್ದಾರೆ ಎಂದು ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಪ್ರಸಾದ್ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವುದು, ಗ್ರಾಮಸ್ಥರಿಗೆ ವಿವಿಧ ಸವಲತ್ತು ತಲುಪಿಸುವ ಬಗ್ಗೆ ಚರ್ಚಿಸಲಾಗುವುದು. ಭೂ ದಾಖಲಾತಿ ಸಮಸ್ಯೆಗಳು ಮತ್ತು ಕಲ್ಯಾ ಕಾಲೊನಿ ಮತ್ತು ಸಂಪಿಗೆ ಮರದ ಕಾಡುಗೊಲ್ಲರ ಹಟ್ಟಿ, ಬೆಸ್ತರಹಟ್ಟಿಯ ನಿವಾಸಿಗಳಿಂದ ಸಮಸ್ಯೆಗಳ ಬಗ್ಗೆ ಅರ್ಜಿ ಸ್ವೀಕರಿಸಲಿದ್ದಾರೆ.
ಕಲ್ಯಾ ಬೆಟ್ಟದಲ್ಲಿನ ಸ್ಮಾರಕಗಳನ್ನು ವೀಕ್ಷಣೆ ಮಾಡಲಿದ್ದಾರೆ. ಸಾರ್ವಜನಿಕರು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲು ಸಲ್ಲಿಸಬಹುದು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.