ADVERTISEMENT

ಫಲಾನುಭವಿ ಪಟ್ಟಿ ಶೀಘ್ರ ಸಿದ್ದಪಡಿಸಿ:ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ

ಸವಲತ್ತು ವಿತರಣೆ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 4:54 IST
Last Updated 22 ಫೆಬ್ರುವರಿ 2026, 4:54 IST
   

ಪ್ರಜಾವಾಣಿ ವಾರ್ತೆ

ರಾಮನಗರ: ‘ಮಾರ್ಚ್ ಮೊದಲ ವಾರದಲ್ಲಿಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಫಲಾನುಭವಿಗಳ ಪಟ್ಟಿಯನ್ನು ಶೀಘ್ರ ಸಿದ್ದಪಡಿಸಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಅಂದಾಜು 75 ಸಾವಿರ ಫಲಾನುಭವಿಗಳು ಭಾಗವಹಿಸುವ ಸಾಧ್ಯತೆ ಇದೆ’ ಎಂದರು.

ADVERTISEMENT

‘ಕೃಷಿ, ತೋಟಗಾರಿಕೆ, ರೇಷ್ಮೆ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ, ಪಶುಪಾಲನೆ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೌಲಭ್ಯ ಪಡೆಯಲಿರುವ ಫಲಾನುಭವಿಗಳನ್ನು ಗುರುತಿಸಿ, ಪಟ್ಟಿ ಮಾಡಿ ಡಿ.ಸಿ ಕಚೇರಿಗೆ ನೀಡಬೇಕು’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಬಿಂಬಿಸುವ ಮಳಿಗೆಗಳ ಪ್ರದರ್ಶನ ಏರ್ಪಡಿಸಲಾಗುವುದು. ಅದಕ್ಕೆ ಅಗತ್ಯ ಮಾಹಿತಿಯನ್ನು ಕ್ರೋಢಿಕರಿಸಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ರಘು, ಉಪವಿಭಾಗಾಧಿಕಾರಿ ಬಿನೋಯ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.