ADVERTISEMENT

ಸಕಾಲಕ್ಕೆ ಸಾಲ ಮರು ಪಾವತಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 3:03 IST
Last Updated 17 ಆಗಸ್ಟ್ 2025, 3:03 IST
ಹಾರೋಹಳ್ಳಿ ಆರ್‌ಎಚ್ಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೆಸಿಸಿ ಬೆಳೆ ಸಾಲ ಮತ್ತು ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸಾಲ ವಿತರಣೆ ಕಾರ್ಯಕ್ರಮ ನಡೆಯಿತು 
ಹಾರೋಹಳ್ಳಿ ಆರ್‌ಎಚ್ಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೆಸಿಸಿ ಬೆಳೆ ಸಾಲ ಮತ್ತು ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸಾಲ ವಿತರಣೆ ಕಾರ್ಯಕ್ರಮ ನಡೆಯಿತು    

ಹಾರೋಹಳ್ಳಿ: ಬಿಡಿಸಿಸಿ ಬ್ಯಾಂಕ್‌ನಿಂದ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಸಾಲ ಕೊಡಲಾಗುತ್ತಿದೆ. ಸಾಲ ಸರಿಯಾದ ಸಮಯಕ್ಕೆ ಪಾವತಿ ಮಾಡಿದರೆ ಇನ್ನೂ ಹಚ್ಚಿನ ಸಾಲ ನೀಡಲಾಗುವುದು ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು.

ಹಾರೋಹಳ್ಳಿ ಆರ್‌ಎಚ್ಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೆಸಿಸಿ ಬೆಳೆಸಾಲ ಮತ್ತು ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸಾಲ ಹಾಗೂ ಹಸು ಸಾಕಾಣಿಕೆ ಸಾಲ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. 

ತಾಲ್ಲೂಕಿನಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ 2ಲಕ್ಷ ಲೀಟರ್ ಹಾಲು ಉತ್ಪಾದನೆ ಗುರಿಯಿದೆ. ಹಾಲಿನಿಂದ ಆದಾಯ ಬಂದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಆಸ್ತಿಗೆ ಹೆಚ್ಚು ಬೆಲೆ ಬಂದಿದೆ ಎಂದರು. 

ADVERTISEMENT

ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಆರ್ಥಿಕವಾಗಿ ಮುಂದುವರಿಯಲು ಸಾಲ ನೀಡುತ್ತಿದ್ದು ಅಂದಾಜು ಶೇ98ರಷ್ಟು ಮರುಪಾವತಿ ಮಾಡಲಾಗುತ್ತಿದೆ. ಮೆಟ್ರೊ ಪ್ರಸ್ತಾವ, ಇಎಸ್‌ಐ ಆಸ್ಪತ್ರೆ, ಆಗ್ನಿಶಾಮಕ ಠಾಣೆ, ಮೂರಾರ್ಜಿ ದೇಸಾಯಿ ಶಾಲೆ ಹಾಗೂ ನಾಲ್ಕು ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, 5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ಕೊಡಲಾಗುವುದು. ಎರಡು ಹಸು ಖರೀದಿ ಮಾಡಲು 1.80ಲಕ್ಷ ಸಾಲ ನೀಡಲಾಗುವುದು. ಬ್ಯಾಂಕ್‌ನಿಂದ ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಗೂಗಲ್ ಪೇ, ಫೋನ್ ಪೇ ಸೌಲಭ್ಯಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ್, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ಅಶೋಕ್, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಭುಜಂಗಯ್ಯ, ಪುಟ್ಟಸ್ವಾಮಿ, ವಿವಿಧ ಗ್ರಾಮಗಳ ವಿಎಸ್‌ಎನ್ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.