ADVERTISEMENT

ಬಿಡದಿ ತೋಟದಲ್ಲಿ ಗೋ ಪೂಜೆ ನೆರವೇರಿಸಿದ ಎಚ್‌ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2021, 8:59 IST
Last Updated 5 ನವೆಂಬರ್ 2021, 8:59 IST
ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಗೋ ಪೂಜೆ ನೆರವೇರಿಸಿದ ಎಚ್‌ಡಿ ಕುಮಾರಸ್ವಾಮಿ.
ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಗೋ ಪೂಜೆ ನೆರವೇರಿಸಿದ ಎಚ್‌ಡಿ ಕುಮಾರಸ್ವಾಮಿ.   

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಶುಕ್ರವಾರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಬಿಡದಿಯ ತೋಟದಲ್ಲಿ ಗೋ ಪೂಜೆ ನೆರವೇರಿಸಿದರು.

ಗೋ ಪೂಜೆ ಮಹತ್ವದ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.

ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಆಚರಿಸುತ್ತಾರೆ.

ADVERTISEMENT

ಅದರಲ್ಲೂ ಬೆಳಕಿನ ಹಬ್ಬ ದೀಪಾವಳಿ ವೇಳೆ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಬಿಡದಿಯ ನನ್ನ ತೋಟದಲ್ಲಿ ಗೋ ಪೂಜೆಯನ್ನು ಇಂದು ನೆರವೇರಿಸಲಾಯಿತು. ಮತ್ತೊಮ್ಮೆ ಎಲ್ಲರಿಗೂ ದೀಪಾವಳಿ ಶುಭಾಶಯಗಳು ಎಂದು ಎಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.