ADVERTISEMENT

ಅಂಗವಿಕಲರಿಗೆ ಸಿಹಿ ವಿತರಣೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 7:15 IST
Last Updated 8 ನವೆಂಬರ್ 2021, 7:15 IST
ಕನಕಪುರದ ಶಿಕ್ಷಕರ ಭವನದಲ್ಲಿ ಪಾಲ್ಗೊಂಡಿರುವ ಗೃಹ ಆಧಾರಿತ ಅಂಗವಿಕಲರು
ಕನಕಪುರದ ಶಿಕ್ಷಕರ ಭವನದಲ್ಲಿ ಪಾಲ್ಗೊಂಡಿರುವ ಗೃಹ ಆಧಾರಿತ ಅಂಗವಿಕಲರು   

ಕನಕಪುರ: ತಾಲ್ಲೂಕಿನಲ್ಲಿರುವ ಗೃಹ ಆಧಾರಿತ ಅಂಗವಿಕಲ ವಿದ್ಯಾರ್ಥಿಗಳಿಗೆ ಉದ್ಯಮಿ ಗೋಪಿನಾಥ್‌ ಜಿ. ಭಲ್ಲರವಾಡ್‌ ದೀಪಾವಳಿ ಹಬ್ಬದ ಪ್ರಯುಕ್ತ ₹ 1 ಸಾವಿರ ನಗದು ಮತ್ತು ಸ್ವೀಟ್‌ ಬಾಕ್ಸ್‌ ವಿತರಿಸಿದರು.

ಇಲ್ಲಿನ ಶಿಕ್ಷಕರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ 111 ಮಕ್ಕಳಿಗೆ ಈ ಅವಕಾಶ ಕಲ್ಪಿಸಿ ಕೊಡಲಾಯಿತು. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನೇ.ರ. ಪ್ರಭಾಕರ್‌ ಮಾತನಾಡಿ, ಕೋವಿಡ್‌ ಸಂದರ್ಭದಲ್ಲಿ ಗೋಪಿನಾಥ್‌ ಅವರು ಬಿಇಒ ಅವರ ಮಾರ್ಗದರ್ಶನದಲ್ಲಿ ತಾಲ್ಲೂಕಿನ 500 ಗೃಹ ಆಧಾರಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ರೇಷನ್‌ ಕಿಟ್‌ ವಿತರಣೆ ಮಾಡಿದ್ದರು ಎಂದು ತಿಳಿಸಿದರು.

ADVERTISEMENT

ದೀಪಾವಳಿ ಹಬ್ಬದ ಪ್ರಯುಕ್ತ ಮಕ್ಕಳಿಗೆ ಸ್ವೀಟ್‌ ಬಾಕ್ಸ್‌ ಮತ್ತು ನಗದು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೊಂದು ಸಾಮಾಜಿಕ ಮತ್ತು ಮಾನವೀಯ ಕೆಲಸ ಎಂದರು.

ತಹಶೀಲ್ದಾರ್‌ ವಿ.ಆರ್‌. ವಿಶ್ವನಾಥ್‌, ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ್‌, ಜಿಲ್ಲಾ ಸಹ ಕಾರ್ಯದರ್ಶಿ ಅಶೋಕ್‌, ಪ್ರಧಾನ ಕಾರ್ಯದರ್ಶಿ ನಟರಾಜು, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್‌, ಸಂಘದ ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.