ಕನಕಪುರ: ನಗರದ ಇಂದಿರಾನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಿದ ಪ್ರೇಮಿಗಳಿಬ್ಬರ ಮೇಲೆ ಹಲ್ಲೆ ನಡೆಸಿ, ತಲೆಯನ್ನು ಅರ್ಧ ಬೋಳಿಸಿ ಅಮಾನುಷವಾಗಿ ವರ್ತಿಸಿರುವವರ ವಿರುದ್ಧ ಗೂಂಡಾಗಿರಿ ಕಾಯ್ದೆ ದಾಖಲಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಪದಾಧಿಕಾರಿಗಳು ಮಂಗಳವಾರ ಪುರ ಪೊಲೀಸರಿಗೆ ದೂರು ಸಲ್ಲಿಸಿದರು.
ಈ ವೇಳೆ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನಗೌಡ ಮಾತನಾಡಿ, ಇಬ್ಬರು ಪ್ರೇಮಿಗಳ ನಡುವೆ ಗುಂಪೊಂದು ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿ ಅಮಾನುಷವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.
ಹಲ್ಲೆಗೊಳಗಾಗಿರುವ ಮಹೇಶ್ ತಾಯಿ ಮೇಲೆಯೂ ಮುಸ್ಲಿಂ ಮಹಿಳೆಯರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆದರೆ, ಈವೆರೆಗೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿಲ್ಲ ಎಂದು ದೂರಿದರು.
ವಿಭಾಗೀಯ ಅಧ್ಯಕ್ಷ ರಾಜೇಶ್, ಜಿಲ್ಲಾಧ್ಯಕ್ಷ ಪರಮೇಶ್, ಪದಾಧಿಕಾರಿಗಳಾದ ಕುಮಾರ್, ಚೀರಣಕುಪ್ಪೆ ನವೀನ್, ಸಾಗರ್, ಸ್ವಾಮಿ, ಪ್ರಭು ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.