ADVERTISEMENT

ಸಂವಿಧಾನ ರಚಿಸಿದ ಧೀಮಂತ ಅಂಬೇಡ್ಕರ್: ಸಿದ್ದರಾಮಯ್ಯ

ಮೊಗೇನಹಳ್ಳಿ: ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 4:52 IST
Last Updated 16 ಏಪ್ರಿಲ್ 2022, 4:52 IST
ಚನ್ನಪಟ್ಟಣ ತಾಲ್ಲೂಕಿನ ಸಂತೆ ಮೊಗೇನಹಳ್ಳಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಚನ್ನಪಟ್ಟಣ ತಾಲ್ಲೂಕಿನ ಸಂತೆ ಮೊಗೇನಹಳ್ಳಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು   

ಚನ್ನಪಟ್ಟಣ: ‘ಜಗತ್ತಿನ ಶ್ರೇಷ್ಠ ಸಂವಿಧಾನವನ್ನು ರಚನೆ ಮಾಡಿದ ಮೇರುನಾಯಕ ಅಂಬೇಡ್ಕರ್ ಅವರನ್ನು ಪೂಜಿಸಿ ಗೌರವಿಸುವುದು ಎಲ್ಲರ ಕರ್ತವ್ಯ’ ಎಂದು ನಿವೃತ್ತ ಹೆಲ್ತ್ ಇನ್‌ಸ್ಪೆಕ್ಟರ್ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸಂತೆ ಮೊಗೇನಹಳ್ಳಿಯಲ್ಲಿ ಅಂಬೇಡ್ಕರ್ ಯುವಕರ ಸಂಘದಿಂದ ಗುರುವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ಯುವಕರು ಅಂಬೇಡ್ಕರ್ ಜಯಂತಿ ಆಚರಣೆ ಮಾಡುತ್ತಿರುವುದು ಅರ್ಥಪೂರ್ಣವಾಗಿದೆ. ಕೇವಲ ಜಯಂತಿ ಆಚರಣೆ ಮಾಡಿದರೆ ಸಾಲದು. ಇಂದಿನ ಯುವಪೀಳಿಗೆ ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದರ ಜೊತೆಗೆ ಉತ್ತಮ ವಿದ್ಯಾರ್ಜನೆ ಮಾಡುವುದರ ಮೂಲಕ ತಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ADVERTISEMENT

ನಿವೃತ್ತ ಡೆಪ್ಯುಟಿ ರಿಜಿಸ್ಟರ್ ಶಿವಣ್ಣ ಮಾತನಾಡಿ, ಯುವಕರು ತಮ್ಮ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು. ಉತ್ತಮ ವಿದ್ಯೆ ಕಲಿಯಬೇಕು. ಈ ದೇಶದ ತಳ ಸಮುದಾಯ ಬದಲಾವಣೆಯಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಅಂಬೇಡ್ಕರ್ ತಿಳಿಸಿಕೊಟ್ಟಿದ್ದರು. ಅದರಂತೆ ಎಲ್ಲರೂ ವಿದ್ಯಾವಂತರಾಗಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ
ನೀಡಿದರು.

ಮುಖಂಡರಾದ ನಾಗರಾಜು, ಮಧು, ಯುವಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.