ರಾಮನಗರ: ಜಿಲ್ಲೆಯಲ್ಲಿ ಶನಿವಾರ ಡೀಸೆಲ್ ಬೆಲೆ ಶತಕ ದಾಟಿದೆ.
ಶುಕ್ರವಾರ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹99.91 ಇತ್ತು. ಈಗ ಪ್ರತಿ ಲೀಟರ್‌ಗೆ 41 ಪೈಸೆ ಏರಿಕೆ ಆಗಿದ್ದು, ಪ್ರಸ್ತುತ ₹100.30 ದರದಲ್ಲಿ ಮಾರಾಟ ಆಗುತ್ತಿದೆ. ಕಳೆದೊಂದು ವಾರದ ಅವಧಿಯಲ್ಲಿಯೇ ಡೀಸೆಲ್ ಬೆಲೆ ಒಟ್ಟು ₹2.23ರಷ್ಟು ಬೆಲೆ ಏರಿಕೆ ಆಗಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ ₹109.49ರಂತೆ ಮಾರಾಟ ನಡೆದಿದೆ.
ಇಂಧನ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿದ್ದು, ಗ್ರಾಹಕರ ಚೇಬಿನ ಭಾರ ಇಳಿಯುತ್ತಲೇ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.