ADVERTISEMENT

ರಾಹುಲ್ ಅನರ್ಹತೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 5:26 IST
Last Updated 30 ಮಾರ್ಚ್ 2023, 5:26 IST
ಐಜೂರು ವೃತ್ತದಲ್ಲಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಐಜೂರು ವೃತ್ತದಲ್ಲಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ರಾಮನಗರ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಐಜೂರು ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ವಾಕ್‌ ಸ್ವಾತಂತ್ರ್ಯಕ್ಕೆ ದೇಶದಲ್ಲಿ ಸಂವಿಧಾನಬದ್ಧ ಅವಕಾಶ ಇದೆ. ರಾಹುಲ್ ಗಾಂಧಿ ಆಡಿರುವ ಮಾತುಗಳು ಸಂವಿಧಾನ ವಿರೋಧಿ ಅಲ್ಲ. ರಾಹುಲ್‌ ಗಾಂಧಿ ಏಳಿಗೆ ಹಾಗೂ ಪಕ್ಷ ಸಂಘಟನೆಯನ್ನು ಸಹಿಸದೇ, ಅಧಿಕಾರ ಕಳೆದುಕೊಳ್ಳುವ
ಭಯದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸತ್ತಿನ ಕಾರ್ಯದರ್ಶಿ ಆದೇಶವನ್ನು ಪುನರ್ ಪರಿಶೀಲಿಸಿ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯರನ್ನಾಗಿ ಮುಂದುವರೆಸಲು ಅವಕಾಶ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವದ ಆಶಯ ಮತ್ತು ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದರು.

ADVERTISEMENT

ದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ದಿನ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆಗಳು ಗಗನಮುಖಿಯಾಗಿವೆ. ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದಕ್ಕೆಲ್ಲ ಪ್ರಧಾನಿ ಮೋದಿರವರ ಸರ್ವಾಧಿಕಾರಿ ಧೋರಣೆಯೇ ಕಾರಣ ಎಂದು ಕಿಡಿಕಾರಿದರು.

ನಗರಸಭೆ ಅಧ್ಯಕ್ಷೆ ಪವಿತ್ರಾ ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಸದಸ್ಯರಾದ ಕೆ. ಶೇಷಾದ್ರಿ, ನಿಜಾಮುದ್ದೀನ್ ಷರೀಫ್‌, ಪಕ್ಷದ ಮುಖಂಡರಾದ ನರಸಿಂಹಯ್ಯ, ಗಾಣಕಲ್‌ ನಟರಾಜು ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.