ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳವಾರ (ಆ.13) ಬೆಳಗ್ಗೆ 11ಕ್ಕೆ ತಾಲ್ಲೂಕಿನ ಕೂಡ್ಲೂರು ರಸ್ತೆಯ ರೆಸಾರ್ಟ್‌ನಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮಿಲನ, ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರುವರು. ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಾಲನೆ ನೀಡಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಪ್ರತಿಭಾ ಪುರಸ್ಕಾರ ನೀಡುವರು. ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಅಧ್ಯಕ್ಷ ರಘನಂದನ್ ರಾಮಣ್ಣ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸುವರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮತ್ತೀಕೆರೆ ಜಯರಾಮು, ಚನ್ನಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಎಂ.ಮಂಜುನಾಥ್, ಗೌಡಗೆರೆ ಬಸವಪ್ಪ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ, ಸಂಸದ ಸಿ.ಎನ್. ಮಂಜುನಾಥ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಎಂ.ಸಿ.ಅಶ್ವಥ್, ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಮಾಜ ಸೇವಕ ಪ್ರಸನ್ನ ಪಿ.ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ರಾಜ್ಯ ಕುಕ್ಕುಟ ಮಹಾಮಂಡಳ ಮಾಜಿ ಅಧ್ಯಕ್ಷ ದುಂತೂರು ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.