ADVERTISEMENT

ಕನಕಪುರದ ಸಿವಿಲ್ ನ್ಯಾಯಾಲಯಕ್ಕೆ ಡಿ.ಕೆ.ಶಿವಕುಮಾರ್ ಹಾಜರು

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 15:58 IST
Last Updated 3 ಜೂನ್ 2025, 15:58 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಕನಕಪುರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಕಪುರದ ಸಿವಿಲ್ ನ್ಯಾಯಾಲಯಕ್ಕೆ ಪ್ರಕರಣವೊಂದರ ವಿಚಾರಣೆಗೆ ಬುಧವಾರ ಹಾಜರಾಗಲಿದ್ದಾರೆ ಎಂದು ಖಚಿತ ಮೂಲಗಳಿಂದ ಮಾಹಿತಿ ದೊರೆತಿದೆ.

ಡಿ.ಕೆ.ಶಿವಕುಮಾರ್ ಅವರು ಶಾಸಕ ಯತ್ನಾಳ್ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಭಂದಿಸಿದಂತೆ ವಿಚಾರಣೆ ನಡೆಯಲಿದೆ. ದೂರುದಾರರು ಖುದ್ದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ತಿಳಿಸಿದ ಹಿನ್ನೆಲೆ ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT