ಡಿಕೆಶಿ
ಕನಕಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಡೆಂಗಿ ಜ್ವರದಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿ ಪಡೆಯಲು ಹೇಳಿದ್ದಾರೆ.
ಪೂರ್ವ ನಿಗದಿತ ಕಾರ್ಯಕ್ರಮ ಸೇರಿದಂತೆ ಮೂರು ದಿನ ಎಲ್ಲಾ ಕಾರ್ಯಕ್ರಮಗಳನ್ನೂ ಮುಂದೂಡಿದ್ದಾರೆ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಕೋಡಿಹಳ್ಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಸಮಾವೇಶದಲ್ಲಿ ಮಾತನಾಡಿದ ಅವರು, ನಾಳೆಯಿಂದ ಯಾರ ಕೈಗೂ ಸಿಗುವುದಿಲ್ಲ ಎಂದರು.
‘ನಿಮ್ಮ ಹೆಣ ಹೊರುವವನು ನಾನೇ, ನಿಮ್ಮ ಪಲ್ಲಕ್ಕಿ ಹೊರುವವನೂ ನಾನೇ. ನನ್ನ ಹೆಣ ಹೊರುವವರು ನೀವೇ. ನನ್ನ ಹಾಗೂ ನಿಮ್ಮ ಸಂಬಂಧ ಭಕ್ತನಿಗೂ, ಭಗವಂತನಿಗೂ ಇರುವ ಸಂಬಂಧ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.