
ರಾಮನಗರ: ಸಂಕ್ರಾಂತಿ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಸುಳಿವು ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಷಯದಲ್ಲಿ ನಾವಿಟ್ಟಿರುವ ಭರವಸೆ ಹುಸಿಯಾಗುವುದಿಲ್ಲ. ನಮ್ಮ ಪ್ರಾರ್ಥನೆಗೆ ಫಲ ಸಿಕ್ಕೇ ಸಿಗುತ್ತದೆ’ ಎಂದರು.
‘ಜ. 6 ಅಥವಾ ಜ. 9ರಂದು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ವಿಶ್ವಾಸವಿತ್ತು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ಈಗಾಗಲೇ ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ’ ಎಂದರು.
ನಾಯಕತ್ವ ಬದಲಾವಣೆ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗೆ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಸದ್ಯದಲ್ಲೇ ಇಬ್ಬರೂ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.