ADVERTISEMENT

ಬಿಜೆಪಿಯವರು ಪರಿಶುದ್ಧರೇ? ಏಕೆ ಇ.ಡಿ ದಾಳಿ ಆಗಲ್ಲ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 4:18 IST
Last Updated 22 ಜುಲೈ 2025, 4:18 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಕನಕಪುರ: ‘ಬಿಜೆಪಿ, ಜೆಡಿಎಸ್‌ ನಾಯಕರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಏಕೆ ದಾಳಿ ಮಾಡುವುದಿಲ್ಲ.  ಬಿಜೆಪಿಯಲ್ಲಿರುವ ಎಲ್ಲರೂ ಪರಿಶುದ್ಧರೇ?’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಇ.ಡಿ ಅಧಿಕಾರಿಗಳಿಗೆ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರಷ್ಟೇ ಕಾಣುತ್ತಾರಾ?  ಎಂದು ಸೋಮವಾರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಒತ್ತಡಗಳಿಗೆ ಮಣಿದು ಯಾರದೋ ಕೈಗೊಂಬೆಯಂತೆ ಇ.ಡಿ ಕೆಲಸ ಮಾಡಬಾರದು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿರುದ್ಧ ತನಿಖೆಗೆ ಇ.ಡಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅಗತ್ಯ ಇರಲಿಲ್ಲ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ನನ್ನ ವಿರುದ್ಧ ಪ್ರಕರಣ ದಾಖಲಿಸಿ ತಿಹಾರ್ ಜೈಲಿಗೆ ಕಳಿಸಿದ್ದರು. ಬಳಿಕ, ಆ ಪ್ರಕರಣ ವಜಾ ಆಯಿತು. ಆ ನೋವು ಅನುಭವಿಸಿದವರಿಗೆ ಮಾತ್ರ ಗೊತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.