
ಕನಕಪುರ(ರಾಮನಗರ): ‘ಇವತ್ತು ನಾನು ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷನಾಗಿದ್ದೇನೆ ಎಂಬ ಕಾರಣಕ್ಕಾಗಿ ಮುಖ್ಯಮಂತ್ರಿಯಾಗಲಿ ಎಂದು ಬೆಂಬಲಿಗರು ಸೇರಿದಂತೆ ಹಲವರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡುತ್ತಿದ್ದಾರೆ. ಆದರೆ, ಇವತ್ತಿನ ಪೂಜೆಗಿಂತ ನಾನು ಜೈಲಿನಲ್ಲಿದ್ದಾಗ ಬಿಡುಗಡೆಗಾಗಿ ಪ್ರಾರ್ಥಿಸಿ ಮಾಡಿದ ಪೂಜೆ ಮರೆಯಲಾಗದು' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕನಕಪುರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿ ಅವಧಿಯಲ್ಲಿ ಜೈಲಿನಿಂದ ಬಿಡುಗಡೆಯಾದಾಗ ಪೊಲೀಸರ ಬೆದರಿಕೆಗೂ ಜಗ್ಗದೆ ಜನ ಸ್ವಾಗತಿಸಿದರು. ನಾನು ಜೈಲಿನಲ್ಲಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಅಂದಿನ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆದರಿಕೆ ಹಾಕಿದ್ದರು. ಕೆಲ ಸ್ವಾಮೀಜಿಗಳು ಬಂದರು, ಉಳಿದವರು ಬರಲಿಲ್ಲ’ ಎಂದರು.
‘ಚನ್ನಪಟ್ಟಣದಲ್ಲಿ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಹೇಳಿಕೆ ಕೊಟ್ಟರು. ಆಗ ಅನೇಕರು ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳಿಗೆ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆ ಹರಕೆ ಮುಗಿಸಲು ಇನ್ನೂ ಆಗುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.