ADVERTISEMENT

ಇಂದು ಕನಕಪುರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 2:20 IST
Last Updated 6 ಜುಲೈ 2025, 2:20 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಕನಕಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ತಾಲ್ಲೂಕಿಗೆ ಭಾನುವಾರ ಭೇಟಿ ನೀಡಲಿದ್ದಾರೆ. ಬೆಳ್ಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಡುವ ಅವರು 11.20ಕ್ಕೆ ತಾಲ್ಲೂಕಿನ ಬಿಜ್ಜಹಳ್ಳಿಗೆ ಬರಲಿದ್ದಾರೆ.

ರಂಭಾಪುರಿ ಜಗದ್ಗುರು ಅವರ ಅಡ್ಡಪಲ್ಲಕ್ಕಿ ಮಹೋತ್ಸವ, ಇಷ್ಟಲಿಂಗ ಮಹಾಪೂಜೆ, ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮ ಜಾಗೃತಿ ಸಮಾರಂಭದಲ್ಲಿ ಅವರು ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಿಜ್ಜಹಳ್ಳಿಯಿಂದ ನಿರ್ಗಮಿಸಿ ಮಧ್ಯಾಹ್ನ 12.45ಕ್ಕೆ ಕೋಡಿಹಳ್ಳಿಗೆ ಬರಲಿದ್ದಾರೆ.ಅಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವರು. 2.30ಕ್ಕೆ ಕೋಡಿಹಳ್ಳಿಯಿಂದ ಹೊರಟು 3 ಗಂಟೆಗೆ ಕನಕಪುರಕ್ಕೆ ಬಂದು ಅಲ್ಲಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ADVERTISEMENT

ಸಂಜೆ 6 ಗಂಟೆಗೆ ಕನಕಪುರದಿಂದ ಹೊರಟು ರಾತ್ರಿ 7 ಗಂಟೆಗೆ ಬೆಂಗಳೂರು ತಲುಪುವರು ಎಂದು ಡಿಸಿಎಂ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.