ADVERTISEMENT

ಕೆಂಕೇರಮ್ಮನ ಮುಂದೆ ‘ಬಿ’ ಫಾರಂ ಇಟ್ಟು ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್‌

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 6:33 IST
Last Updated 29 ಮಾರ್ಚ್ 2024, 6:33 IST
ಕನಕಪುರದ ಕೆಂಕೇರಮ್ಮ ದೇವಾಲಯದಲ್ಲಿ ಗುರುವಾರ ಡಿ.ಕೆ.ಸಹೋದರರು ಪೂಜೆ ಸಲ್ಲಿಸಿದರು
ಕನಕಪುರದ ಕೆಂಕೇರಮ್ಮ ದೇವಾಲಯದಲ್ಲಿ ಗುರುವಾರ ಡಿ.ಕೆ.ಸಹೋದರರು ಪೂಜೆ ಸಲ್ಲಿಸಿದರು   

ಕನಕಪುರ: ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ತಮ್ಮ  ಮನೆದೇವರಾದ ಪಟ್ಟಣದ ಕೆಂಕೇರಮ್ಮ ದೇವಾಲಯದಲ್ಲಿ ಬಿ.ಫಾರಂ ಇಟ್ಟು ಪೂಜೆ ಸಲ್ಲಿಸಿ ಆರ್ಶಿವಾದ ಪಡೆದರು.

ಈ ಸಂದರ್ಭದಲ್ಲಿ ಸುರೇಶ್ ಅವರ ತಾಯಿ ಗೌರಮ್ಮ, ಸಹೋದರಿ ಮಂಜುಳಾ, ಸಹೋದರ, ಡಿಸಿಎಂ ಡಿ.ಕೆ. ಶಿವಕುಮಾರ್, ಉಷಾ ಶಿವಕುಮಾರ್, ಐಶ್ವರ್ಯಾ ಪೂಜೆಯಲ್ಲಿ ಪಾಲ್ಗೊಂಡಿದ್ದರು. 

ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್‌ ಅವರು, ಪ್ರತಿಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ಮನೆದೇವರು ಹಾಗೂ ಕಬ್ಬಾಳಮ್ಮ ದೇವರ ಮುಂದೆ ಬಿ ಫಾರಂ ಇಟ್ಟು ಪೂಜೆ ಸಲ್ಲಿಸುವುದು ವಾಡಿಕೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.