ADVERTISEMENT

ರಾಮನಗರ: ಬೀದಿನಾಯಿ ದಾಳಿಗೆ ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2019, 8:55 IST
Last Updated 4 ನವೆಂಬರ್ 2019, 8:55 IST
ಮೋನಿಕಾ
ಮೋನಿಕಾ    

ರಾಮನಗರ: ಬಿಡದಿ ಪಟ್ಟಣದ ಕೆಂಚನಕುಪ್ಪೆ ಜನತಾ ಕಾಲೊನಿಯಲ್ಲಿ ಬೀದಿ ನಾಯಿಗಳ ದಾಳಿಗೆ ಮೋನಿಕಾ ಎಂಬ ಐದು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಶನಿವಾರ ಸಂಜೆ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಏಕಾಏಕಿ ನಾಯಿಗಳು ದಾಳಿ ಮಾಡಿ ತೀವ್ರ ಗಾಯಗೊಳಿಸಿದ್ದವು. ಬಾಲಕಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಬೆಳಿಗ್ಗೆ ಮೃತಪಟ್ಟಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT