ADVERTISEMENT

ಮಾಗಡಿ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 4:51 IST
Last Updated 16 ಏಪ್ರಿಲ್ 2022, 4:51 IST
ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಕಂಬದಕಲ್ಲು ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ ಚಾಲನೆ ನೀಡಿದರು
ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಕಂಬದಕಲ್ಲು ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ ಚಾಲನೆ ನೀಡಿದರು   

ಮಾಗಡಿ: ಸೋಲೂರು ಹೋಬಳಿಯ ಕಂಬದಕಲ್ಲು-ಮೊಲದಕೋಟೆ ಗ್ರಾಮದ ಸಂಪರ್ಕ ರಸ್ತೆಯನ್ನು ₹ 25 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ನೆಲಮಂಗಲ ಕ್ಷೇತ್ರದ ಶಾಸಕ ಡಾ.ಶ್ರೀನಿವಾಸಮೂರ್ತಿ ತಿಳಿಸಿದರು.

ಕಂಬದಕಲ್ಲು ಗ್ರಾಮದಲ್ಲಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಮಳೆಗಾಲದ ವೇಳೆ ರಸ್ತೆಗಳು ಹದಗೆಡದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ರಸ್ತೆಯ ಮೇಲೆ ಬಿದ್ದ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಂಡರೆ ಹಾಳಾಗುವುದಿಲ್ಲ. ರಸ್ತೆ ಅಭಿವೃದ್ಧಿ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಲು ಗ್ರಾಮಸ್ಥರು ನಿಗಾವಹಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಜಿ.ಪಂ. ಮಾಜಿ ಸದಸ್ಯೆ ನಾಜಿಯಾ ಖಾನಂ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಎನ್‌. ಗಂಗರಾಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.