ADVERTISEMENT

ಮಾಗಡಿ | ವೈ.ಜಿ. ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವತಿಯರ ಸಾವು

​ಪ್ರಜಾವಾಣಿ ವಾರ್ತೆ
Published 19 ಮೇ 2025, 10:55 IST
Last Updated 19 ಮೇ 2025, 10:55 IST
   

ಮಾಗಡಿ: ತಾಲ್ಲೂಕಿನ ವೈ.ಜಿ. ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಯುವತಿಯರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿವಾಸಿಗಳಾದ ಭಾರ್ಗವಿ(22), ರಮ್ಯ(20) ಹಾಗೂ ಮಧು (25) ಮೃತರು.

ವೈ.ಜಿ. ಗುಡ್ಡ ಗ್ರಾಮದಲ್ಲಿ ನಡೆದಿದ್ದ ಹಬ್ಬದ ಸಲುವಾಗಿ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದರು. ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು ಆಟವಾಡುತ್ತಿದ್ದ ಯುವತಿಯರ ಪೈಕಿ, ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ.

ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸಲು ಉಳಿದಿಬ್ಬರು ಮುಂದಾಗಿದ್ದಾರೆ. ಆಗ ಅವರು ಸಹ ನೀರಿನ ಸೆಳೆತಕ್ಕೆ ಸಿಲುಕಿ ಮುಳಗತೊಡಗಿದ್ದಾರೆ. ಕಣ್ಣೆದುರಿಗೆ ಕುಟುಂಬದ ಯುವತಿಯರು ಮುಳುಗುತ್ತಿದ್ದನ್ನು ಕಂಡು ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ವಿಷಯ ತಿಳಿದು ಸ್ಥಳಕ್ಕೆ ತೆರಳಿ ಮೂವರು ಯುವತಿಯರನ್ನು ಶವವನ್ನು ನೀರಿನಿಂದ ಮೇಲಕ್ಕೆತ್ತಿ, ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.