ಹಾರೋಹಳ್ಲಿ: ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ವಶಪಡಿಸಿಕೊಂಡಿದ್ದ 34 ಕೆ.ಜಿ 750 ಗ್ರಾಂ ಮಾದಕವಸ್ತುವನ್ನು ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಘಟಕದಲ್ಲಿ ಸೋಮವಾರ ನಾಶಪಡಿಸಲಾಯಿತು.
ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗಿದ್ದ 14 ಪ್ರಕರಣಗಳ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅನುಮತಿ ಪಡೆದು ಮಾದಕವಸ್ತು ವಿಲೇವಾರಿ ಸಮಿತಿ ಹಾಗೂ ಪಂಚರ ಸಮಕ್ಷಮ ನಿಯಮಾನುಸಾರ ನಾಶಪಡಿಸಲಾಯಿತು.
ಈ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ಡಿವೈಎಸ್ಪಿಗಳಾದ ಕೆ.ಸಿ. ಗಿರಿ ಹಾಗೂ ಬಿ.ಎನ್. ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.