
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ರಾಮನಗರ: ನಗರದ ಹೊರವಲಯದ ರಂಗರಾಯನದೊಡ್ಡಿ ಕೆರೆ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಐಜೂರು ಠಾಣೆ ಪೊಲೀಸರು, ಆರೋಪಿಗಳಿಂದ 2.5 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತು ಹಾಗೂ ₹2 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.
ನಗರದ ತೌಸಿಫ್ ಮಹಮ್ಮದ್(26) ಮತ್ತು ನವಾಜ್ ಪಾಷಾ(25) ಬಂಧಿತರು. ಆರೋಪಿಗಳು ಕೆರೆ ರಸ್ತೆಯಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಕುರಿತು ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮಾಲು ಸಮೇತ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದರು.
ಆರೋಪಿಗಳು ಬೆಂಗಳೂರಿನ ಸಿಟಿ ಮಾರ್ಕೆಟ್‌ನಲ್ಲಿರುವ ಪರಿಚಿತರೊಬ್ಬರ ಅಂಗಡಿಯೊಂದರಲ್ಲಿ ತಂದು ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.