ADVERTISEMENT

ಕನಕಪುರ | ಗಾಂಜಾ ಮಾರಾಟ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2025, 16:09 IST
Last Updated 7 ಮಾರ್ಚ್ 2025, 16:09 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಕನಕಪುರ: ಇಲ್ಲಿನ ಬಸವೇಶ್ವರ ನಗರದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ದಾಳಿ ನಡೆಸಿ, ಗುರುವಾರ ಬಂಧಿಸಿದ್ದಾರೆ.

ADVERTISEMENT

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಂಗಡಿ ಗ್ರಾಮದ ವೀರಮಾದು (28) ಬಂಧಿತ. ಆರೋಪಿಯು ವಿದ್ಯಾರ್ಥಿಯಂತೆ ಶಾಲಾ ಬ್ಯಾಗ್‌ ಹಾಕಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಯಿಂದ ₹75 ಸಾವಿರ ಮೌಲ್ಯದ 3.2 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.