ADVERTISEMENT

ಬೀದಿಬದಿ ವ್ಯಾಪಾರಿಗಳ ಸಮಿತಿಗೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 13:29 IST
Last Updated 29 ಡಿಸೆಂಬರ್ 2019, 13:29 IST
ಬೀದಿಬದಿ ವ್ಯಾಪಾರಿಗಳ ಸಮಿತಿಗೆ ಆಯ್ಕೆಯಾದವರನ್ನು ಅಭಿನಂದಿಸಲಾಯಿತು
ಬೀದಿಬದಿ ವ್ಯಾಪಾರಿಗಳ ಸಮಿತಿಗೆ ಆಯ್ಕೆಯಾದವರನ್ನು ಅಭಿನಂದಿಸಲಾಯಿತು   

ರಾಮನಗರ: ಇಲ್ಲಿನ ನಗರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ನಗರ ಸಮಿತಿಯ ಪದಾಧಿಕಾರಿಗಳ ಆಯ್ಕೆಗೆ ಪ್ರಥಮ ಚುನಾವಣೆ ನಡೆಯಿತು.

ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭನನದಲ್ಲಿ ನಡೆದ ಚುನಾವಣೆಯಲ್ಲಿ ನಗರಸಭೆಯಲ್ಲಿ ನೋಂದಾಯಿಸಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳು ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.

ಅಧ್ಯಕ್ಷರಾಗಿ ಬೈರಲಿಂಗಯ್ಯ, ಉಪಾಧ್ಯಕ್ಷರಾಗಿ ಯಲ್ಲಪ್ಪ, ಕಾರ್ಯದರ್ಶಿಯಾಗಿ ಮಹದೇವಯ್ಯ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಿಜಯಮ್ಮ, ಜಿಲ್ಲಾ ಘಟಕದ ಸಂಚಾಲಕರಾಗಿ ಅಬ್ದುಲ್ ರಿಯಾಜ್, ಸಂಘಟನಾ ಪ್ರಚಾರಕರಾಗಿ ಕಾಂತರಾಜು, ವೆಂಕಟೇಶ್, ಬಾಬು, ದೂಳಮ್ಮ, ಚಿಕ್ಕತಾಯಮ್ಮ ಪದಾಧಿಕಾರಿಗಳ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ಚುನಾವಣಾಧಿಕಾರಿಯಾಗಿ ರಾಮನಗರ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು ಕಾರ್ಯನಿರ್ವಹಿಸಿದರು.

ಚುನಾವಣಾ ಪ್ರಕ್ರಿಯೆಯ ಸಹಾಯಕರಾಗಿ ಆರ್. ಶ್ರೀಧರ್, ಪ್ರಸನ್ನಕುಮಾರಿ, ಶಿವಾನಂದರೆಡ್ಡಿ, ಚೇತನ್, ಸೋಮೇಶ್, ಶರಣ್ಯ ಹಾಗೂ ನರಸಿಂಹಮೂರ್ತಿ ಕಾರ್ಯನಿರ್ವಹಿಸಿದರು.

‘ಅವಿರೋಧವಾಗಿ ಆಯ್ಕೆ ಮಾಡಿದ ಸಮಿತಿಯ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಮಿತಿಯ ಉದ್ದೇಶಗಳನ್ನು ಈಡೇರಿಸುತ್ತೇನೆ’ ಎಂದು ನೂತನ ಅಧ್ಯಕ್ಷ ಬೈರಲಿಂಗಯ್ಯ ತಿಳಿಸಿದರು. ನಗರಸಭೆ ಪೌರಾಯುಕ್ತೆ ಬಿ. ಶುಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.