
ಪ್ರಜಾವಾಣಿ ವಾರ್ತೆ
ಚನ್ನಪಟ್ಟಣ: ನಗರದ ಎಲೇಕೇರಿಯಲ್ಲಿರುವ ಪುರಾಣ ಪ್ರಸಿದ್ಧ ಪ್ರಸನ್ನಾಂಜನೇಯ ದೇವಾಲಯದಲ್ಲಿ ಮಂಗಳವಾರ ಅದ್ದೂರಿಯಾಗಿ ಹನುಮಜಯಂತಿ ಆಚರಣೆ ಮಾಡಲಾಯಿತು.
ಬೆಳಗ್ಗೆಯಿಂದಲೇ ಅರ್ಚನೆ, ಅಭಿಷೇಕ, ಮಹಾ ಮಂಗಳಾರತಿ, ಉತ್ಸವ ಸೇರಿದಂತೆ ವಿಶೇಷ ಪೂಜಾಕಾರ್ಯಕ್ರಮಗಳು ಜರುಗಿದವು. ವಿಶೇಷ ಪೂಜೆ ನಂತರ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಲಾಯಿತು. ಪ್ರಸನ್ನಾಂಜನೇಯಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣವನ್ನು ವಿದ್ಯುತ್ ದ್ವೀಪಗಳಿಂದ ಅಲಂಕರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.