
ಪ್ರಜಾವಾಣಿ ವಾರ್ತೆ
ಕನಕಪುರ: ಕೋಡಿಹಳ್ಳಿ ಹೋಬಳಿ ಚಾಮುಂಡಿಪುರ ಗ್ರಾಮದಲ್ಲಿ ಕಾಡಾನೆಗಳ ಗುಂಪು ಗುರುವಾರ ರಾತ್ರಿ ದಾಳಿ ನಡೆಸಿ, ಕಟಾವಿಗೆ ಬಂದಿದ್ದ ರಾಗಿ ಬೆಳೆಯನ್ನು ನಾಶಪಡಿಸಿದೆ. ಈ ಘಟನೆಯಿಂದ ಹಲವು ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
ನಷ್ಟಕ್ಕೆ ಒಳಗಾದ ರೈತ ಗುಂಡ ನಾಯ್ಕ, ‘ಕುಟುಂಬದವರೆಲ್ಲ ಕಷ್ಟಪಟ್ಟು ಬೆಳೆದ ರಾಗಿಯನ್ನು ಒಂದೇ ರಾತ್ರಿಯಲ್ಲಿ ಆನೆಗಳು ನಾಶ ಮಾಡಿವೆ. ಬೆಳೆ ಬೆಳೆಯುವಾಗ ಮಾತ್ರ ಅರಣ್ಯ ಇಲಾಖೆಯವರು ಕಾವಲು ನಿಂತಿದ್ದರು. ಕಟಾವಿನ ಸಮಯದಲ್ಲಿ ಈ ಕಾವಲು ಇಲ್ಲದ್ದರಿಂದ ಈ ನಷ್ಟ ಸಂಭವಿಸಿದೆ. ಸರ್ಕಾರದಿಂದ ಸಿಗುವ ಪರಿಹಾರ ನಷ್ಟಕ್ಕೆ ಸಾಕಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಪರಿಹಾರ ನೀಡುವ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.