
ಕನಕಪುರ: ತಾಲ್ಲೂಕಿನ ಸಾತನೂರು ಅರಣ್ಯ ವಲಯದ ವ್ಯಾಪ್ತಿಯ ಕುನ್ನೂರಿನಲ್ಲಿರುವ ಅರ್ಕಾವತಿ ನದಿಯ ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ.
ಹಿನ್ನೀರಿನಲ್ಲಿ ಕಾಡಾನೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ಆನೆಗಳು ಕೊನೆಯುಸಿರೆಳೆದಿರುವುದು ಗೊತ್ತಾಗಿದೆ.
ಕಾಡಾನೆಗಳು ಹಿನ್ನೀರು ದಾಟಲು ಮುಂದಾದಾಗ, ನೀರಿನಲ್ಲಿ ಆವರಿಸಿರುವ ಸತ್ತೆಗೆ (ನೀರಿನ ಕಳೆ) ಸಿಲುಕಿವೆ. ಮುಂದಕ್ಕೆ ಮತ್ತು ಹಿಂದಕ್ಕೆ ಹೋಗಲಾಗದೆ ಅಲ್ಲೇ ಒದ್ದಾಡಿ ಮೃತಪಟ್ಟಿವೆ ಎನ್ನಲಾಗಿದೆ.
ಸ್ಥಳಕ್ಕೆ ಡಿಸಿಎಫ್ ರಾಮಕೃಷ್ಣಪ್ಪ, ಎಸಿಎಫ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳ ಕಳೇಬರವನ್ನು ಹಿನ್ನೀರಿನಿಂದ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.