ADVERTISEMENT

ರಾಮನಗರ | ಒತ್ತಡ ನಿವಾರಿಸುವ ಕ್ರೀಡಾ ಚಟುವಟಿಕೆ: ಎಸ್‌ಪಿ

ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2025, 14:42 IST
Last Updated 17 ಏಪ್ರಿಲ್ 2025, 14:42 IST
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಹಾಗೂ ಪದಾಧಿಕಾರಿಗಳು ಇದ್ದಾರೆ
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಹಾಗೂ ಪದಾಧಿಕಾರಿಗಳು ಇದ್ದಾರೆ   

ರಾಮನಗರ: ‘ಸರ್ಕಾರಿ ನೌಕರರು ನಿತ್ಯ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ದೈನಂದಿನ ಒತ್ತಡ ನಿವಾರಣೆಗೆ ಕ್ರೀಡೆ ಚಟುವಟಿಕೆಗಳು ಅತ್ಯುತ್ತಮ ಮಾರ್ಗವಾಗಿವೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಒತ್ತಡದಿಂದ ಮುಕ್ತರಾಗಿ, ಉತ್ತಮ ಆರೋಗ್ಯ ಹೊಂದಬಹುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ಸಲಹೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

‘ಅಧಿಕಾರಿಗಳು ಹಾಗೂ ಸಿಬ್ಬಂದಿ ಸರ್ಕಾರದ ದಿನ ನಿತ್ಯದ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಮಾನಸಿಕವಾಗಿ ಸ್ವಸ್ಥವಾಗಿರಬೇಕು. ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಆಹ್ಲಾದಕರ ಎನಿಸುತ್ತದೆ.ವಿಶೇಷವಾಗಿ ಒತ್ತಡ ನಿವಾರಣೆಯಾಗುತ್ತದೆ. ಆದ ಕಾರಣ ಸರ್ಕಾರಿ ನೌಕರರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು’ ಎಂದರು.

ADVERTISEMENT

‘ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಶಿವಮೊಗ್ಗದಲ್ಲಿ ನಡೆಯಲಿದೆ. ಜಿಲ್ಲೆಯ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿ ಹೆಚ್ಚಿನ ಪದಕಗಳನ್ನು ಗೆಲ್ಲುವ ಮೂಲಕ, ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಎತ್ತಿ ಹಿಡಿಯಬೇಕು’ ಎಂದು ಶುಭ ಕೋರಿದರು.

ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಮಾತನಾಡಿದರು. ವೈಯಕ್ತಿಕ ವಿಭಾಗದ ಕ್ರೀಡೆಗಳಲ್ಲಿ ಅಥ್ಲೆಟಿಕ್ಸ್, ಗುಂಡು ಎಸೆತ, ಜಾವಲಿನ್, ರಿಲೇ, ತಟ್ಟೆ ಎಸೆತ, ಗುಂಪು ಕ್ರೀಡೆಗಳಲ್ಲಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಕಬ್ಬಡ್ಡಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಾನಪದ ನೃತ್ಯ, ಹಾಡುಗಳು, ಭರತನಾಟ್ಯ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜೇಗೌಡ, ಖಜಾಂಚಿ ಜಗದೀಶ್, ಗೌರವಾಧ್ಯಕ್ಷ ಕಾಂತರಾಜು, ಮಾಗಡಿ ತಾಲ್ಲೂಕು ಅಧ್ಯಕ್ಷ ಜಯರಾಮ್, ಚನ್ನಪಟ್ಟಣದ ಸುಧೀಂದ್ರ, ಕನಕಪುರ ಅಧ್ಯಕ್ಷ ನಂದೀಶ್, ಹಾರೋಹಳ್ಳಿ ಅಧ್ಯಕ್ಷ ಎಸ್.ಪಿ. ಗೌಡ, ಹಿರಿಯ ಉಪಾಧ್ಯಕ್ಷ ಭೈರಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್, ಶಿವಸ್ವಾಮಿ, ದೀಪಕ್, ಪ್ರದೀಪ್, ರಂಗಸ್ವಾಮಿ, ರಾಮಸ್ವಾಮಿ, ರಂಗಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.