ADVERTISEMENT

ಹಿರಿಯ ನಾಗರಿಕರ ಸಬಲೀಕರಣ: ಯೋಗಕ್ಷೇಮ ಕೇಂದ್ರ ತೆರೆಯಲು ಪ್ರಸ್ತಾವಕ್ಕೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 2:43 IST
Last Updated 12 ಫೆಬ್ರುವರಿ 2026, 2:43 IST
<div class="paragraphs"><p>ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ </p></div>

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

   

ರಾಮನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಅರ್ಹ, ಆಸಕ್ತ ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.

ಪ್ರಸ್ತಾವವನ್ನು ಫೆ. 21ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ಕೊಠಡಿ ಸಂಖ್ಯೆ: 107, ನೆಲ ಮಹಡಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಬಿ.ಎಂ. ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ, ದೂ: 080-29500205 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.