ADVERTISEMENT

ಮಹಿಳಾ ಸಂರಕ್ಷಣೆ ಕಾಯ್ದೆ ಸಮರ್ಪಕವಾಗಿ ಅನುಷ್ಠಾನ ಮಾಡಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 21:34 IST
Last Updated 14 ಅಕ್ಟೋಬರ್ 2019, 21:34 IST
ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಮಾತನಾಡಿದರು
ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಮಾತನಾಡಿದರು   

ರಾಮನಗರ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೌಟುಂಬಿಕ ಹಿಂಸೆ ಸಂಬಂಧಿಸಿದಂತೆ ದಾಖಲಾದ ದೂರುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಹೇಳಿದರು.

ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಗಳ ಅನುಷ್ಠಾನ ಸಂಬಂಧಿಸಿದಂತೆ ಸೋಮವಾರ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತ ನ್ಯಾಯಾದಾನ ವ್ಯವಸ್ಥೆ ಮಾಡಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ಮಾಡಿ, ನಂತರ ಪ್ರಕರಣ ಸಂಬಂಧ ಸತ್ಯ ಸತ್ಯಾತೆ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.

ADVERTISEMENT

ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ದೂರುಗಳನ್ನು ದಾಖಲಿಸಿಕೊಂಡು ಇತ್ಯರ್ಥಪಡಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಯ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯವಿಭವ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಗಾಯತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.