ಮೇಕೆದಾಟು
ಕನಕಪುರ: ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿ, ಇಲ್ಲಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ಇದರಿಂದಾಗಿ ಕಾವೇರಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಾಲ್ಲೂಕಿನ ಸಂಗಮ ಮತ್ತು ಮೇಕೆದಾಟು ಪ್ರದೇಶಗಳಲ್ಲಿ ಪ್ರವಾಸಿ ತಾಣಗಳಿಗೆ ಆ. 5ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಈ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದಾಗ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಂಗಮ, ಬೋರೆಗಾಳಿ, ಮೇಕೆದಾಟು ಪ್ರವಾಸಿ ತಾಣ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಆ. 5ರ ಸಂಜೆ 6 ಗಂಟೆವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಡಾ. ಸ್ಮಿತಾ ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.