ADVERTISEMENT

ರೈತ ಹೋರಾಟಗಾರ ಲಕ್ಷ್ಮಣಸ್ವಾಮಿ ನಿಧನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 2:59 IST
Last Updated 7 ಆಗಸ್ಟ್ 2020, 2:59 IST
ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮಣಸ್ವಾಮಿ
ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮಣಸ್ವಾಮಿ   

ರಾಮನಗರ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮಣಸ್ವಾಮಿ (60) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಹಲವು ರೈತ ಪರ ಚಳವಳಿಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆಯು ಶುಕ್ರವಾರ ಬೆಳಗ್ಗೆ 10ಕ್ಕೆ ಹುಟ್ಟೂರು ಚನ್ನಪಟ್ಟಣ ತಾಲ್ಲೂಕಿನ ಕದರಮಂಗಲ ಗ್ರಾಮದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT