ADVERTISEMENT

ಮಾಗಡಿ: ಹೇಮಾವತಿ ಎಕ್ಸ್‌ಪ್ರೆಸ್‌ ಕಾಲುವೆಗೆ ವಿರೋಧ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 8:21 IST
Last Updated 3 ಡಿಸೆಂಬರ್ 2024, 8:21 IST
<div class="paragraphs"><p>ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು</p></div>

ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು

   

ಮಾಗಡಿ: ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧ ಮಾಡುತ್ತಿರುವ ಸೊಗಡು ಶಿವಣ್ಣ ವಿರುದ್ಧ ಧಿಕ್ಕಾರ ಕೂಗಿ ಸೊಗಡು ಶಿವಣ್ಣ ಪ್ರತಿಕೃತಿ ಧರಿಸಿ ಆಕ್ರೋಶ ವ್ಯಕ್ಯಪಡಿಸಿದರು.

ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದು ಮುಂದೆ ಇದೇ ರೀತಿ ವಿರೋಧ ವ್ಯಕ್ತಪಡಿಸಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಎಚ್ಚರಿಕೆ ನೀಡಿದರು.

ADVERTISEMENT

ಪೊಲೀಸರಿಂದ ತಡೆ: ಹೇಮಾವತಿ ವಿರೋಧಿಸಿ ನಾಳೆ ತುಮಕೂರಿನಲ್ಲಿ ಪಾದಯಾತ್ರೆ ಮಾಡುತ್ತಿರುವ ವಿರುದ್ಧ ರೈತ ಸಂಘ ಬೆಂಗಳೂರು-ಕುಣಿಗಲ್ ಮುಖ್ಯ ರಸ್ತೆ ಅಗೆದು ಪ್ರತಿಭಟನೆ ಮಾಡಲು ಮುಂದಾದರು.

ಆಗ ಪೊಲೀಸರು ರಸ್ತೆಯ ಅಗೆಯಲು ಅವಕಾಶ ಕೊಡುವುದಿಲ್ಲ ಪ್ರತಿಭಟನೆಗೆ ಮಾತ್ರ ಅವಕಾಶ ನೀಡುತ್ತೇವೆ ಎಂದರು. ರೈತರು ರಸ್ತೆ ಅಗೆಯಲು ತಂದಿದ್ದ ಜೆಸಿಬಿ, ಹಾರೆ ಕೋಲು ತಂದು ವಾಪಸ್ ತೆಗೆದುಕೊಂಡು ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.