ADVERTISEMENT

ರೈತರು ಬದುಕಿದ್ದರೆ ಹೋರಾಟದಲ್ಲಿ ಭಾಗವಹಿಸಲಿ: ಶಾಸಕ ಎಚ್.ಸಿ.ಬಾಲಕೃಷ್ಣ ಕಿಡಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 22:30 IST
Last Updated 4 ಜೂನ್ 2025, 22:30 IST
ಮಾಗಡಿ ಪಟ್ಟಣದ ತಿರುಮಲೆ ಕುಂಬಾರ ಬೀದಿ ರಸ್ತೆ ಕಾಮಗಾರಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಗುದ್ದಲಿ ಪೂಜೆ ನೆರವೇರಿಸಿದರು 
ಮಾಗಡಿ ಪಟ್ಟಣದ ತಿರುಮಲೆ ಕುಂಬಾರ ಬೀದಿ ರಸ್ತೆ ಕಾಮಗಾರಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಗುದ್ದಲಿ ಪೂಜೆ ನೆರವೇರಿಸಿದರು    

ಮಾಗಡಿ: ‘ನಮ್ಮ ನೀರು ನಮ್ಮ ಹಕ್ಕು’ ವಿಚಾರವಾಗಿ ಜೂನ್ 5ರಂದು ಮರೂರು ಹ್ಯಾಂಡ್‌ ಪೋಸ್ಟ್‌ನಲ್ಲಿ ರಸ್ತೆ ತಡೆದು ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇನೆ. ತಾಲೂಕಿನಲ್ಲಿ ರೈತರು ಬದುಕಿದ್ದರೆ ಹೋರಾಟದಲ್ಲಿ ಭಾಗವಹಿಸುತ್ತಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತೀಕ್ಷ್ಣವಾಗಿ ನುಡಿದರು.

ಪಟ್ಟಣದ ತಿರುಮಲೆ ಗ್ರಾಮದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿಗೆ ಹೇಮಾವತಿ ನೀರು ತರಲು ರಸ್ತೆ ತಡೆ ಹಮ್ಮಿಕೊಂಡಿದ್ದೇವೆ. ಇದು ಪಕ್ಷದ ಕಾರ್ಯಕ್ರಮವೂ ಅಲ್ಲ, ನನ್ನ ಮಗಳ ಮದುವೆಯೂ ಅಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ತಾಲ್ಲೂಕಿನಲ್ಲಿ ರೈತರು ಜೀವಂತವಾಗಿದ್ದರೆ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ ಎಂದರು.

ತುಮಕೂರಿನವರು ಅನವಶ್ಯಕವಾಗಿ ನಮ್ಮೊಂದಿಗೆ ಜಗಳವಾಡುವುದು ಬೇಡ. ನಮಗೆ ಹಂಚಿಕೆಯಾಗಿರುವ ನೀರನ್ನು ನಮಗೆ ಕೊಡಲಿ. ಲಿಂಕ್ ಕೆನಾಲ್ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ADVERTISEMENT

ಹೇಮಾವತಿ ನೀರನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ತುಮಕೂರಿನವರು ಅಪಪ್ರಚಾರ ಮಾಡುತ್ತಿರುವುದಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಾಸ್ತವವಾಗಿ ಮಾಗಡಿ ತಾಲ್ಲೂಕಿಗೆ ಮುಕ್ಕಾಲು ಟಿಎಂಸಿ ನೀರು ಹಂಚಿಕೆಯಾಗಿದ್ದು, ಅದನ್ನು ಪಡೆಯುವವರೆಗೆ ಬಿಡುವುದಿಲ್ಲ, ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.‌

ಈ ವೇಳೆ ಪುರಸಭಾಧ್ಯಕ್ಷೆ ರಮ್ಯ ನರಸಿಂಹಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯ ರಂಗಹನುಮಯ್ಯ, ನಾಮಿನಿ ಸದಸ್ಯ ತಿರುಮಲೆ ಪ್ರಕಾಶ್, ರಾಧ ರಾಜೇಶ್, ಗಂಗಣ್ಣ, ಅಂಗನವಾಡಿ ಕಾರ್ಯಕರ್ತೆ ಚಂದ್ರಕಲಾ, ಚಂದ್ರಶೇಖರ್, ಡೇರಿ ಬಸವರಾಜ್, ಮುಖ್ಯಾಧಿಕಾರಿ ಶಿವರುದ್ರಯ್ಯ, ಇಂಜಿನಿಯರ್ ಪ್ರಶಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಪಟ್ಟಣದ ನಾಲ್ಕನೇ ವಾರ್ಡಿನ ತಿರುಮಲೆಯಲ್ಲಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ. ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ₹1.20 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ₹ 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ. ಎರಡನೇ ವಾರ್ಡಿನ ತಿರುಮಲೆಯಲ್ಲಿ ಪ್ರಗತಿಪಥ ಯೋಜನೆಯಡಿ ₹1 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ. ಆರನೇ ವಾರ್ಡಿನ ಹೊಸಪೇಟೆ ವೃತ್ತದ ಬಳಿ ಕೆ-ಶಿಪ್ ವತಿಯಿಂದ ನಿರ್ಮಿಸಲಾಗುತ್ತಿರುವ ಸಾರ್ವಜನಿಕ ಶೌಚಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ. ಹೊಸಪೇಟೆ ವೃತ್ತದ ಬಳಿ ಆಂಜನೇಯ ಸ್ವಾಮಿ ದೇವಸ್ಥಾನ ಕಟ್ಟಡ ಭೂಮಿ ಪೂಜೆಯನ್ನು ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಪುರಸಭಾ ಸದಸ್ಯರು ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.