ADVERTISEMENT

ಇಬ್ಬರು ಪುತ್ರರಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 2:19 IST
Last Updated 8 ನವೆಂಬರ್ 2025, 2:19 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹಾರೋಹಳ್ಳಿ: ತಾಲ್ಲೂಕಿನ ಚಿಕ್ಕ ಸಾದೇನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಅಶ್ವಥ್ (38) ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಗುರುವಾರ ಈ ಘಟನೆ ನಡೆದಿದೆ. ಅಶ್ವಥ್ ದಂಪತಿ ನಡುವೆ ಎರಡು-ಮೂರು ದಿನಗಳ ಹಿಂದೆ ಜಗಳ ನಡೆದಿತ್ತು. ಅಶ್ವಥ್ ಮನೆ ಬಿಟ್ಟು ಹೋಗಿದ್ದರು. ತಮ್ಮ ಇಬ್ಬರು ಮಕ್ಕಳಾದ ಮಿಥುನ್ ಮತ್ತು ಜಯವರ್ಧನ್‌ಗೆ ವಿಷ ಕುಡಿಸಿದ್ದರು. ನಂತರ ತಾವೂ ಮದ್ಯದೊಂದಿಗೆ ವಿಷ ಸೇವಿಸಿದ್ದರು.

ಮೂವರೂ ಪ್ರಜ್ಞಾಹೀನರಾಗಿದ್ದರು. ಇದನ್ನು ಗಮನಿಸಿದ ನೆರೆಹೊರೆಯವರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಶ್ವಥ್ ಆಸ್ಪತ್ರೆಗೆ ತಲುಪುವ ವೇಳೆಗೆ ಮೃತಪಟ್ಟಿದ್ದರು. ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಒಬ್ಬ ಮಗು ಚೇತರಿಸಿಕೊಂಡರೆ, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

ಹಾರೋಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾರೋಹಳ್ಳಿ:ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ತನ್ನಿಬ್ಬರು ಮಕ್ಕಳಿಗೆ ಗುರುವಾರ ಸಂಜೆ ವಿಷ ಕುಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಚಿಕ್ಕ ಸಾದೇನಹಳ್ಳಿ ನಿವಾಸಿ ಅಶ್ವಥ್(38) ಆತ್ಮಹತ್ಯೆ ಮಾಡಿಕೊಂಡವರು. ಇಬ್ಬರು ಮಕ್ಕಳ ಪೈಕಿ ಒಬ್ಬರು ಚೇತರಿಸಿಕೊಂಡಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಅಶ್ವಥ್ ಮತ್ತು ಪತ್ನಿ ನಡುವೆ ಎರಡ್ಮೂರು ದಿನದ ಹಿಂದೆ ಜಗಳವಾಗಿತ್ತು. ಆಗ ಪತಿ ಮನೆ ಬಿಟ್ಟು ಹೋಗಿದ್ದರು. ಇದರಿಂದ ಬೇಸತ್ತ ಅಶ್ವಥ್ ಅವರು ಇಬ್ಬರೂ ಮಕ್ಕಳಾದ ಮಿಥುನ್, ಜಯವರ್ಧನ ಅವರಿಗೆ ವಿಷ ಕುಡಿಸಿದ್ದಾರೆ. ಬಳಿಕ, ತಾವೂ ಮದ್ಯದೊಂದಿಗೆ ವಿಷ ಸೇವಿಸಿದ್ದಾರೆ. ಪ್ರಜ್ಞಾಹೀನರಾಗಿ ಮನೆಯಲ್ಲಿ ಬಿದ್ದಿದ್ದ ಮೂವರನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಸಮೀಪದ ಆಸ್ಪತ್ರೆಗೆ ಸೇರಿಸಿದ್ದಾರೆ.ಆದರೆ, ಅಷ್ಟೊತ್ತಿಗಾಗಲೇ ಅಶ್ವಥ್ ಅವರು ಕೊನೆಯುಸಿರೆಳೆದಿದ್ದರು. ಮಕ್ಕಳಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಶ್ವಥ್ ಅವರ ಶವವನ್ನು ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಾರೋಹಳ್ಳಿ ಪೊಲೀಸರು ತಿಳಿಸಿದರು.ಅಶ್ವಥ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಇಬ್ಬರು ಮಕ್ಕಳಿಗೆ ವಿಷ ಕೊಟ್ಟ ಟ್ಟು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಕಪಕ್ಕದ ಮನೆಯವರು ಗಮನಿಸಿ ಇಬ್ಬರು ಮಕ್ಕಳ ಆಸ್ಪತ್ರೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು ಒಬ್ಬ ಮಗ ಅರೋಗ್ಯವಾಗಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಮಾರಣೋತ್ತರ ಪರೀಕ್ಷೆ ನಡೆಸುತ್ತಿದ್ದುಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಆಗಮಿಸಿದ್ದು

ಪರಿಶೀಲನೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.