ADVERTISEMENT

ಡೇರಿಯಲ್ಲಿ ಅವ್ಯವಹಾರ ಆರೋಪ: ಇಬ್ಬರ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 18:21 IST
Last Updated 20 ಜುಲೈ 2025, 18:21 IST
ಹಾರೋಹಳ್ಳಿ ತಾಲೂಕಿನ ದೊಡ್ಡ ಮುದವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ
ಹಾರೋಹಳ್ಳಿ ತಾಲೂಕಿನ ದೊಡ್ಡ ಮುದವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ   

ಹಾರೋಹಳ್ಳಿ: ತಾಲೂಕಿನ ದೊಡ್ಡಮುದುವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳ (ಸಿಇಒ) ವಿರುದ್ಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಹಾಗೂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಗಳಾಗಿದ್ದ ನಾಗರಾಜು ಮತ್ತು ಚಂದ್ರಶೇಖರ್ ತಮ್ಮ ಅವಧಿಯ ಲೆಕ್ಕಪತ್ರ ಹಾಗೂ ಇತರ ದಾಖಲೆಗಳನ್ನು ಹಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಹಸ್ತಾಂತರ ಮಾಡಿಲ್ಲ.ಇದರಿಂದ ಸಂಘದ ಲೆಕ್ಕಪತ್ರಗಳನ್ನು ಆಡಿಟ್ ನಡೆಸಲು ಮತ್ತು ವಾರ್ಷಿಕ ಸಭೆ ನಡೆಸಲು ಸಾಧ್ಯವಾಗಿಲ್ಲ. ಇದರಿಂದ ಸಂಘಕ್ಕೆ ಆರ್ಥಿಕ ನಷ್ಟವಾಗಿದೆ ಎಂದು ಬೈರೇಗೌಡ ಎಂಬುವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಅಮಾನತುಗೊಂಡ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು ₹19.72 ಲಕ್ಷ ದುರುಪಯೋಗ ಪಡಿಸಿಕೊಂಡಿದ್ದಾರೆ ಹಾಗೂ  ಪ್ರಭಾರ ಕಾರ್ಯದರ್ಶಿಯಾಗಿದ್ದ ಚಂದ್ರಶೇಖರ್ ₹5.14 ಲಕ್ಷ ದುರುಪಯೋಗ ಮಾಡಿಕೊಂಡಿರುವುದು ಲೆಕ್ಕ ಪರಿಶೋಧನೆಯಲ್ಲಿ ಬೆಳಕಿಗೆ ಬಂದಿದೆ.

ADVERTISEMENT

ಹಲವು ಬಾರಿ ನೋಟಿಸ್ ನೀಡಿದ್ದರೂ ಸ್ಪಂದಿಸದ ಇಬ್ಬರಿಂದ ಸಂಘಕ್ಕೆ ಬರಬೇಕಾದ ಹಣ ವಸೂಲಿ ಮಾಡಿಕೊಡಬೇಕು ಎಂದು ದೂರುದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.