ಕುದೂರು: ಪಟ್ಟಣದ ಇತಿಹಾಸ ಪ್ರಸಿದ್ಧ ಭೈರವದುರ್ಗ ಬೆಟ್ಟದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಒಣ ಸಸ್ಯಗಳು ಮತ್ತು ಪೊದೆಗಳಿಗೆ ಹರಡಿದ ಬೆಂಕಿಯನ್ನು ಅರಣ್ಯ ಇಲಾಖೆ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ.
ಬೆಟ್ಟಗಳ ಮೇಲಿನ ಒಣ ಹುಲ್ಲಿಗೆ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಬೆಟ್ಟದ ತಪ್ಪಲಿನ ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅರಣ್ಯ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ಕೈಗೊಂಡರು.
ಕೆಲ ಕಿಡಿಗೇಡಿಗಳು ಭೈರವದುರ್ಗ ಬೆಟ್ಟದಲ್ಲಿ ಬೆಂಕಿ ಹಚ್ಚುವ ಕೃತ್ಯಕ್ಕೆ ಕೈ ಹಾಕುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.