ADVERTISEMENT

ಶಿಕ್ಷಕಿಗೆ ಪ್ರಥಮ ಸ್ಥಾನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 3:56 IST
Last Updated 28 ಅಕ್ಟೋಬರ್ 2021, 3:56 IST
ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಉಮಾ ಹೆಗ್ಗಡೆ ಟ್ರೋಪಿ ಸ್ವೀಕರಿಸುತ್ತಿರುವುದು
ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಉಮಾ ಹೆಗ್ಗಡೆ ಟ್ರೋಪಿ ಸ್ವೀಕರಿಸುತ್ತಿರುವುದು   

ಕನಕಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಹುಣಸನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಉಮಾ ಹೆಗ್ಗಡೆ ಅವರು ಹಿಂದೂಸ್ಥಾನಿ ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉಮಾ ಹೆಗ್ಗಡೆ ರಾಮನಗರ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಸಾಂಸ್ಕೃತಿಕ ವಿಭಾಗದಲ್ಲಿ ಗೆಲುವು ಸಾಧಿಸಿ ತಾಲ್ಲೂಕಿಗೆ ಕೀರ್ತಿ ತಂದಿರುವ ಅವರನ್ನು ಕನಕಪುರ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿಕ್ಕೆಂಪೇಗೌಡ ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.