ADVERTISEMENT

ಕೆ.ಸ್ಪಂದನ ತಾಲ್ಲೂಕಿಗೆ ಪ್ರಥಮ ಸ್ಥಾನ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 14:23 IST
Last Updated 15 ಏಪ್ರಿಲ್ 2019, 14:23 IST
ಸ್ಪಂದನ
ಸ್ಪಂದನ   

ಚನ್ನಪಟ್ಟಣ: ಪಟ್ಟಣದ ಸೇಂಟ್ ಆನ್ಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಸ್ಪಂದನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 585 ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಅವರು ಕನ್ನಡದಲ್ಲಿ 98, ಆಂಗ್ಲಭಾಷೆಯಲ್ಲಿ 93, ಭೌತಶಾಸ್ತ್ರದಲ್ಲಿ 98, ರಸಾಯನಶಾಸ್ತ್ರದಲ್ಲಿ 100, ಗಣಿತಶಾಸ್ತ್ರದಲ್ಲಿ 100, ಜೀವಶಾಸ್ತ್ರದಲ್ಲಿ 96 ಅಂಕ ಪಡೆದು ಒಟ್ಟಾರೆ ಶೇ 97.5 ಅಂಕಗಳೊಂದಿಗೆ ಈ ಸಾಧನೆ ಮಾಡಿದ್ದಾರೆ.

ಈ ಸಾಧನೆಯೊಂದಿಗೆ ಸೇಂಟ್ ಆನ್ಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಸತತವಾಗಿ 6 ನೇ ವರ್ಷ ತಾಲ್ಲೂಕಿಗೆ ಪ್ರಥಮ ಸ್ಥಾನ ಕಾಯ್ದುಕೊಂಡಂತಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಸಹಾಯ ಮೇರಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ವಿದ್ಯಾಸಂಸ್ಥೆ ವ್ಯವಸ್ಥಾಪಕಿ ಸಿಸ್ಟರ್ ಬ್ರಿಜಿಟ್ ಜಾನ್, ಪ್ರಾಂಶುಪಾಲೆ ಸಿಸ್ಟರ್ ಸಹಾಯ ಮೇರಿ, ಉಪ ಪ್ರಾಂಶುಪಾಲ ಎಚ್.ಎಂ.ರಮೇಶ್, ಉಪನ್ಯಾಸಕರು, ಸಿಬ್ಬಂದಿ ವರ್ಗ ಮೆಚ್ಚುಗೆ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.