
ಪ್ರಾತಿನಿಧಿಕ ಪತ್ರ
ರಾಮನಗರ: 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ, ಮಾಗಡಿ ತಾಲ್ಲೂಕಿನ ನಾಯಕನಪಾಳ್ಯ ಗ್ರಾಮದ ಬುಡಕಟ್ಟು ಸಮುದಾಯದ ಪರಿಶಿಷ್ಟ ಪಂಗಡದ ಅರ್ಹ ಮೀನುಗಾರ ಫಲಾನುಭವಿಗಳಿಂದ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಮಾಗಡಿ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಡಿ. 17ರೊಳಗೆ ಕಚೇರಿ ವೇಳೆಯಲ್ಲಿ ಮಾಗಡಿ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಗಡಿ ತಾಲ್ಲೂಕು, ಮೊಬೈಲ್ ಸಂಖ್ಯೆ: 9880347733 ಸಂಪರ್ಕಿಸುವಂತೆ ಮಾಗಡಿ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.