ADVERTISEMENT

ಚನ್ನಪಟ್ಟಣ: ಅಳಿವಿನ ಅಂಚಿಗೆ ಜನಪದ ಕಲಾ ಪ್ರಕಾರ

​ಪ್ರಜಾವಾಣಿ ವಾರ್ತೆ
Published 20 ಮೇ 2025, 15:57 IST
Last Updated 20 ಮೇ 2025, 15:57 IST
ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡೆ, ಎನ್‌ಸಿಸಿ, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ಇತರ ಸಮಿತಿ ಚಟುವಟಿಕೆಗಳ ಸಮಾರೋಪವನ್ನು ಶಾಸಕ ಸಿ.ಪಿ.ಯೋಗೇಶ್ವರ್ ಉದ್ಘಾಟಿಸಿದರು
ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡೆ, ಎನ್‌ಸಿಸಿ, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ಇತರ ಸಮಿತಿ ಚಟುವಟಿಕೆಗಳ ಸಮಾರೋಪವನ್ನು ಶಾಸಕ ಸಿ.ಪಿ.ಯೋಗೇಶ್ವರ್ ಉದ್ಘಾಟಿಸಿದರು   

ಚನ್ನಪಟ್ಟಣ: ಅಳಿವಿನ ಅಂಚಿಗೆ ಸರಿಯುತ್ತಿರುವ ಜನಪದ ಕಲಾ ಪ್ರಕಾರಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಗುರುತರ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಜಾನಪದ ವಿದ್ವಾಂಸ ಡಾ.ಹಿ.ಚಿ.ಬೋರಲಿಂಗಯ್ಯ ಕಿವಿಮಾತು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡೆ, ಎನ್‌ಸಿಸಿ, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ಇತರ ಸಮಿತಿ ಚಟುವಟಿಕೆ ಸಮಾರೋಪದಲ್ಲಿ ಮಾತನಾಡಿದರು. 

ಯುವ ಜನರು ಜಾನಪದ ಸಂಸ್ಕೃತಿಯಿಂದ ದೂರ ಉಳಿದಿದ್ದಾರೆ. ಅಳಿವಿನಂಚಿಗೆ ತಲುಪಿರುವ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ವಿದ್ಯಾರ್ಥಿಗಳು ಸಮಯ ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಚನ್ನಪಟ್ಟಣದ ಪದವಿ ಕಾಲೇಜು ಉತ್ತಮ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದರು. 

ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ರಾಮಕೃಷ್ಣ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪರಿಪೂರ್ಣ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಉಷಾಮಾಲಿನಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ವಾಸಿಲ್ ಆಲಿಖಾನ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಜಗದೀಶ್ ನಡುವಿನಮಠ, ಎನ್‌ಎಸ್‌ಎಸ್ ಸಮಿತಿ ಸಂಚಾಲಕ ಡಾ. ಬೋರೇಗೌಡ, ಕ್ರೀಡಾ ಸಮಿತಿ ಸಂಚಾಲಕ ಆರ್.ನಂಜುಂಡ, ರೋವರ್ಸ್ ಮತ್ತು ರೇಂಜರ್ಸ್ ಸಮಿತಿ ಸಂಚಾಲಕ ಡಾ.ಪ್ರಭು ವಿ.ಉಪಾಸೆ, ಸಹಾಯಕ ಪ್ರಾಧ್ಯಾಪಕ ಡಾ.ಚೆನ್ನಮ್ಮ, ಹರೀಶ್ ಕುಮಾರ್, ಡಾ.ಮುಜಾಯಿದ್ ಖಾನ್, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.