ADVERTISEMENT

ಕನಕಪುರ: ಬಾಲಕಿಗೆ ವಿವಾಹ ಪೋಷಕರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 2:05 IST
Last Updated 23 ಆಗಸ್ಟ್ 2025, 2:05 IST
<div class="paragraphs"><p>ಬಾಲ್ಯ ವಿವಾಹ</p></div>

ಬಾಲ್ಯ ವಿವಾಹ

   

ಕನಕಪುರ: ಅಪ್ರಾಪ್ತ ಬಾಲಕಿಯೊಬ್ಬರಿಗೆ ಬಾಲ್ಯ ವಿವಾಹ ಮಾಡಿರುವ ಪ್ರಕರಣ ನಡೆದಿದೆ. ಬಾಲ್ಯ ವಿವಾಹಕ್ಕೆ ಕಾರಣರಾದ ಪೋಷಕರ ವಿರುದ್ಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಗ್ರಾಮವೊಂದರ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.

ADVERTISEMENT

‌ಜಿಲ್ಲಾ ಮಕ್ಕಳ ರಕ್ಷಣಾ ಹಕ್ಕುಗಳ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಬಾಲ್ಯವಿವಾಹ ನಡೆದಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ಪೋಷಕರು ಬಾಲಕಿಯೊಂದಿಗೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗುವಂತೆ ಮಕ್ಕಳ ರಕ್ಷಣಾ ಹಕ್ಕುಗಳ ಘಟಕದ ಅಧಿಕಾರಿಗಳು ಪೋಷಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.