ಚನ್ನಪಟ್ಟಣ: ಪಟ್ಟಣದ ಕೇಂಬ್ರಿಜ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್‌ಬಾಲ್ ಕ್ರೀಡಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಮನಗರದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕಾಲೇಜಿನ ಸೈಯದ್ ಉಮ್ರೇಜ್ ಹಾಗೂ ತಂಡ ಪ್ರಥಮ ಸ್ಥಾನ ಪಡೆದು ಈ ಸಾಧನೆ ಮಾಡಿದೆ.
ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಎಸ್.ಲಿಂಗೇಶ್ ಕುಮಾರ್, ಟ್ರಸ್ಟಿ ಎಂ.ಆರ್.ಚಿತ್ರಾ, ಪ್ರಾಂಶುಪಾಲ ನಿಂಗೇಗೌಡ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.