ಕನಕಪುರ: ನಗರದ ಮಳಗಾಳು ರಸ್ತೆ ಅರ್ಕಾವತಿ ಸೇತುವೆ ಬಳಿ ಕನಕಪುರ ನಗರಕ್ಕೆ ನೀರು ಪೂರೈಕೆ ಮಾಡುವ ಪೈಪ್ ಒಡೆದಿದೆ. ಇದರಿಂದ ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದ್ದು ಅದನ್ನು ಶೀಘ್ರವಾಗಿ ಸರಿಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ನಗರದಲ್ಲಿ ನೀರಿನ ಸಮಸ್ಯೆ ನಿವಾರಿಸಲು ನಗರಸಭೆಯು ಅರ್ಕಾವತಿ ನದಿಯಿಂದ ಕನಕಪುರಕ್ಕೆ ಪೈಪ್ ಮೂಲಕ ನೀರು ಪೂರೈಕೆ ಮಾಡುತ್ತದೆ. ಈಗ ಬೇಸಿಗೆ ಇರುವುದರಿಂದ ನಗರದ ಕೆಲ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಕಡಿಮೆಯಾಗಿ ನೀರಿನ ಅಭಾವ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ನಗರಕ್ಕೆ ಪ್ರಮುಖವಾಗಿ ನೀರು ಪೂರೈಕೆ ಮಾಡುತ್ತಿದ್ದ ಪೈಪ್ ಒಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.