
ಪ್ರಜಾವಾಣಿ ವಾರ್ತೆ
ಚನ್ನಪಟ್ಟಣ: ತಾಲ್ಲೂಕಿನ ಮತ್ತೀಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಹೊನ್ನೇಗೌಡ (78) ಗುರುವಾರ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯ ಆಡಳಿತ ಮಂಡಳಿಯ ಸಹಕಾರ್ಯದರ್ಶಿಯಾಗಿ, ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮತ್ತೀಕೆರೆಯಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.