ADVERTISEMENT

ರಾಮನಗರ | ಬ್ಯೂಟಿ ಪಾರ್ಲರ್ ತರಬೇತಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 3:07 IST
Last Updated 24 ಸೆಪ್ಟೆಂಬರ್ 2025, 3:07 IST
   

ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ಕುರಿತು 35 ದಿನಗಳ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ. ನ. 4ರಿಂದ ಆರಂಭವಾಗಲಿರುವ ತರಬೇತಿಗೆ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ADVERTISEMENT

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9113880324, 8027728166 ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.