ADVERTISEMENT

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು: ಎಲ್. ಸತೀಶ್ ಚಂದ್ರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 3:12 IST
Last Updated 17 ಆಗಸ್ಟ್ 2025, 3:12 IST
<div class="paragraphs"><p>ರಾಮನಗರ ತಾಲ್ಲೂಕಿನ ಬಿಡದಿಯ&nbsp;ಜ್ಞಾನವಿಕಾಸ್ ವಿದ್ಯಾಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆ, ಜ್ಞಾನವಿಕಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಜ್ಞಾನವಿಕಾಸ್ ಹಿರಿಯ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನ ಆಚರಿಸಲಾಯಿತು. </p></div>

ರಾಮನಗರ ತಾಲ್ಲೂಕಿನ ಬಿಡದಿಯ ಜ್ಞಾನವಿಕಾಸ್ ವಿದ್ಯಾಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆ, ಜ್ಞಾನವಿಕಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಜ್ಞಾನವಿಕಾಸ್ ಹಿರಿಯ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನ ಆಚರಿಸಲಾಯಿತು.

   

ಬಿಡದಿ (ರಾಮನಗರ): ‘ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯವು ಹಲವರ ತ್ಯಾಗ ಮತ್ತು ಬಲಿದಾನದ ಫಲವಾಗಿದೆ. ದೇಶದ ಸ್ವಾತಂತ್ರ್ಯದ ಹೋರಾಟಕ್ಕೆ ಶ್ರಮಿಸಿದ ಮಹನೀಯರ ಹೋರಾಟ, ತ್ಯಾಗ,ಬಲಿದಾನಗಳನ್ನು ವಿದ್ಯಾರ್ಥಿಗಳು ಅರಿಯಬೇಕು. ವಿದ್ಯಾರ್ಥಿ ದೆಸೆಯಲ್ಲೇ ದೇಶಭಕ್ತಿ ಭಾವನೆ ಬೆಳೆಸಿಕೊಳ್ಳಬೇಕು’ ಎಂದು ಜ್ಞಾನವಿಕಾಸ್ ವಿದ್ಯಾ ಸಂಘದ ನಿರ್ದೇಶಕ ಎಲ್. ಸತೀಶ್ ಚಂದ್ರ ಹೇಳಿದರು.

ತಾಲ್ಲೂಕಿನ ಬಿಡದಿ ಪಟ್ಟಣದಲ್ಲಿರುವ ಜ್ಞಾನವಿಕಾಸ್ ವಿದ್ಯಾಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆ, ಜ್ಞಾನವಿಕಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಜ್ಞಾನವಿಕಾಸ್ ಹಿರಿಯ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ADVERTISEMENT

ಜ್ಞಾನವಿಕಾಸ್ ವಿದ್ಯಾ ಸಂಘದ ಸಹ ಕಾರ್ಯದರ್ಶಿ ಸಿ. ಲೋಕೇಶ್ ಮತನಾಡಿ, ‘ದೇಶಕ್ಕೆ ಸ್ವಾತಂತ್ರ್ಯವು ಸುಲಭವಾಗಿ ಬಂದಿದ್ದಲ್ಲ. ಅದರ ಹಿಂದೆ ರಾಜ– ಮಹಾರಾಜರ ಹಲವು ರೋಚಕ ಹೋರಾಟಗಳಿವೆ. ಮಹಾತ್ಮ ಗಾಂಧೀಜಿ ಅವರ ಅಹಿಂಸಾ ಹೋರಾಟದ ಇತಿಹಾಸವಿದೆ. ಮಕ್ಕಳು ಇವೆಲ್ಲವನ್ನು ಅರಿತುಕೊಳ್ಳಬೇಕು. ಆಗ ಮಾತ್ರ ನಮ್ಮ ದೇಶದ ಬಗ್ಗೆ ನಮಗೆ ಸ್ವಾಭಿಮಾನ ಹಾಗೂ ಹೆಮ್ಮೆ ಬರಲು ಸಾಧ್ಯ’ ಎಂದರು.

ಶಾಲಾ ವಿದ್ಯಾರ್ಥಿಗಳು ಧ್ವಜ ವಂದನೆ ಹಾಗೂ ದೇಶಭಕ್ತಿ ಹಿನ್ನಲೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆರ್.ಎಸ್. ಗಿರೀಶ್, ಜ್ಞಾನವಿಕಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಾನ್ಸನ್ ಅಬ್ರಹಾಂ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಕೃಷ್ಣಮೂರ್ತಿ ಹಾಗೂ ಸ ಶಿಕ್ಷಕ ಶಿಕ್ಷಕಿಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.