ಚನ್ನಪಟ್ಟಣ: ಭಾನುವಾರ ಸಂಜೆ ನಿಧನರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ತಂದೆ ತಾಲ್ಲೂಕಿನ ಚಕ್ಕೆರೆ ಗ್ರಾಮದ ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಸ್ವಗ್ರಾಮ ಚಕ್ಕೆರೆಯ ಯೋಗೇಶ್ವರ್ ತೋಟದಲ್ಲಿ ವಿಧಿವತ್ತಾಗಿ ನೆರವೇರಿತು.
ಪುಟ್ಟಮಾದೇಗೌಡ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ನಿಧನರಾಗಿದ್ದರು. ಭಾನುವಾರ ರಾತ್ರಿ ಪುಟ್ಟಮಾದೇಗವಡ ಅವರ ಪಾರ್ಥೀವ ಶರೀರ ಸ್ವಗ್ರಾಮ ತಾಲ್ಲೂಕಿನ ಚಕ್ಕೆರೆ ಗ್ರಾಮಕ್ಕೆ ಆಗಮಿಸಿತು. ರಾತ್ರಿ ಹಾಗೂ ಸೋಮವಾರ ಸಾವಿರಾರು ಜನರು ಅಂತಿಮ ದರ್ಶನ ಪಡೆದರು. ನಂತರ ನಡೆದ ಅಂತ್ಯಕ್ರಿಯೆಯಲ್ಲಿ ಹಿರಿಯ ಪುತ್ರ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವಿಧಿವಿಧಾನ ನಡೆಸಿಕೊಟ್ಟರು.
ಸಂಸದ ಡಾ.ಸಿ.ಎನ್.ಮಂಜುನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮದ್ದೂರು ಶಾಸಕ ಕದಲೂರು ಉದಯ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ರಾಜ್ಯ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಎಂ.ಸಿ.ಅಶ್ವಥ್, ಅಂದಾನಿ, ಕೆ.ರಾಜು, ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಹಲವಾರು ಗಣ್ಯರು ಅಂತಿಮ ದರ್ಶನ ಪಡೆದರಲ್ಲಿ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.